Publish Date: Fri, 04 Jul 2025 (08:19 IST)
Updated Date: Fri, 04 Jul 2025 (08:21 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಇಂದೂ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದೂ ಭಾರೀ ಮಳೆಯ ಸೂಚನೆಯಿದೆ. ಆದರೆ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದೂ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ವರದಿ ಪ್ರಕಾರ ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗದಗ, ಕೋಲಾರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಉಳಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ಧಾರವಾಢ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಇಂದು ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 21 ಡಿಗ್ರಿಯಷ್ಟಿರಲಿದೆ.