Publish Date: Sat, 02 Aug 2025 (08:27 IST)
Updated Date: Sat, 02 Aug 2025 (08:29 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮುಂಗಾರು ಕೊಂಚ ಕ್ಷೀಣವಾಗಿದ್ದು ಮಳೆಯ ಅಬ್ಬರ ಕಡಿಮೆಯಾಗಿದೆ. ಹವಾಮಾನ ವರದಿ ಪ್ರಕಾರ ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಲೇ ಇದೆ. ಕಳೆದ ವಾರವಿಡೀ ಭಾರೀ ಮಳೆಯಾಗಿತ್ತು. ಆದರೆ ಈ ವಾರ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಇಂದೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆಯಷ್ಟೇ.
ಆದರೆ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವಾರವಿಡೀ ಮೋಡ ಕವಿದ ವಾತಾವರಣ ಮತ್ತು ಕೆಲವೊಮ್ಮೆ ಮಾತ್ರ ತುಂತುರು ಮಳೆಯಾಗಿತ್ತು. ಇಂದೂ ಕೂಡಾ ಸಣ್ಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಕೋಲಾರ, ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಗದಗ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ.