Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

Krishnaveni K
ಶನಿವಾರ, 28 ಜೂನ್ 2025 (08:35 IST)
ಬೆಂಗಳೂರು: ರಾಜ್ಯಾದ್ಯಂತ ಈಗ ಮಳೆಯ ಅಬ್ಬರ ಕಂಡುಬರುತ್ತಿದೆ. ಆದರೆ ಈಗ ಬರುವುದಕ್ಕಿಂತಲೂ ಅಧಿಕ ಮಳೆ ಮುಂದೆ ಕಾದಿದೆ. ಮುಂದಿನ ತಿಂಗಳು ಮಳೆ ಮತ್ತಷ್ಟು ಬಿರುಸಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಇದೀಗ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೂನ್ 29 ರವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ವಿಜ್ಞಾನಿ ಸಿಸಿ ಪಾಟೀಲ್ ಪ್ರಕಾರ ಮುಂದಿನ ತಿಂಗಳು 10 ನೇ ತಾರೀಕಿನಿಂದ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ಜುಲೈ 24 ರವರೆಗೂ ಭಾರೀ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಇಂದಿನಿಂದ ಜುಲೈ 10 ರವರೆಗೆ ಮಳೆಯ ಅಬ್ಬರ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ಅವರು ಹೇಳಿದ್ದಾರೆ.

ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಅದರಲ್ಲೂ ವಿಶೇಷವಾಗಿ ಈ ಬಾರಿ ಕರಾವಳಿ ನಗರಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಮಳೆಗಿಂತ ಮೋಡ ಕವಿದ ವಾತಾವರಣವೇ ಹೆಚ್ಚಾಗಿ ಕಂಡುಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments