Publish Date: Fri, 01 Aug 2025 (08:24 IST)
Updated Date: Fri, 01 Aug 2025 (08:26 IST)
ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಲೇ ಇತ್ತು. ಆದರೆ ಇಂದು ಈ ಕೆಲವು ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಮಳೆಯಿಂದ ಬಿಡುವು ಸಿಗಲಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ತಣ್ಣಗಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನಿರಂತರ ಮಳೆಯಾಗುತ್ತಿದೆ. ಇಂದೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ಹುಬ್ಬಳ್ಳಿ, ಹಾವೇರಿ, ಚಿತ್ರದುರ್ಗ, ಬೆಳಗಾವಿ, ವಿಜಯಪುರ, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಶಿವಮೊಗ್ಗ, ಬೆಂಗಳೂರು, ಕೋಲಾರ, ತುಮಕೂರು, ಬಾಗಲಕೋಟೆ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ವರದಿ ಹೇಳಿದೆ.
ಹವಾಮಾನ ವರದಿ ಪ್ರಕಾರ ಇನ್ನು ಒಂದು ವಾರ ಕಾಲ ಬಹುತೇಕ ಕಡೆ ಮಳೆಯ ಅಬ್ಬರ ಕಡಿಮೆಯಾಗಲಿದೆ. ಆಗಸ್ಟ್ ಎರಡನೇ ವಾರದವರೆಗೂ ಹಲವೆಡೆ ಸಾಧಾರಣ ಮಳೆಯಾಗಲಿದೆ. ಆದರೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.