Publish Date: Tue, 22 Jul 2025 (08:40 IST)
Updated Date: Tue, 22 Jul 2025 (08:43 IST)
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಇಂದೂ ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಈ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಬೀದರ್ ನಲ್ಲೂ ಭಾರೀ ಮಳೆಯ ಸೂಚನೆಯಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ನಿರಂತರ ಮಳೆಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿರಂತರ ಮಳೆಯಾಗುತ್ತಿದೆ. ಇಂದೂ ಬೆಂಗಳೂರಿಗೆ ಮಳೆಯ ಸೂಚನೆಯಿದೆ.
ಉಳಿದಂತೆ ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಾಮರಾಜನಗರ, ಬೆಳಗಾವಿ, ಹಾವೇರಿ, ಕೊಪ್ಪಳ, ದಾವಣಗೆರೆ, ರಾಯಚೂರು, ಬಾಗಲಕೋಟೆ, ಗದಗ, ಹುಬ್ಬಳ್ಳಿ, ವಿಜಯಪುರ, ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದೆ ಎಂದು ತಿಳಿದುಬಂದಿದೆ.