Publish Date: Wed, 03 Sep 2025 (08:29 IST)
Updated Date: Wed, 03 Sep 2025 (08:31 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮತ್ತೆ ಮಳೆ ಅಬ್ಬರಿಸುತ್ತಿದೆ. ಹವಾಮಾನ ವರದಿಗಳ ಪ್ರಕಾರ ಇಂದು ಮತ್ತು ನಾಳೆ ಈ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.
ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ, ಒಳನಾಡು, ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು ಈ ವಾರಂತ್ಯದವರೆಗೆ ಭಾರೀ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ.
ವಿಶೇಷವಾಗಿ ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ. ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.
ಉಳಿದಂತೆ ಬೆಂಗಳೂರು, ಮೈಸೂರು, ಕೊಡಗು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಗದಗ, ಕಲಬುರಗಿ, ಕೊಪ್ಪಳ, ಬೀದರ್, ದಾವಣಗೆರೆ, ಯಾದಗಿರಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ರಾಮನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸೂಚನೆಯಿದೆ.