Publish Date: Fri, 27 Jun 2025 (08:40 IST)
Updated Date: Fri, 27 Jun 2025 (08:44 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಈ ಭಾಗಗಳಿಗೆ ಭಾರೀ ಮಳೆ ಮುನ್ಸೂಚನೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಇಂದು ಭಾರೀ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ.
ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ಇಂದು ಮತ್ತು ನಾಳೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ನಿನ್ನೆಯಿಂದಲೇ ಈ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆಯಾಗುತ್ತಿದೆ. ಇಂದೂ ಮಳೆಯ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಚಾಮರಾಜನಗರ, ರಾಯಚೂರು ಇಂದು ಮೋಡ ಕವಿದ ವಾತಾವರಣವಿರಲಿದೆ.
ಬೀದರ್, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಮತ್ತು ಕನಿಷ್ಠ 20 ಡಿಗ್ರಿಯಷ್ಟಿರಲಿದೆ.