Publish Date: Thu, 09 Apr 2026 (08:51 IST)
Updated Date: Thu, 09 Apr 2026 (08:53 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ. ಇದರ ನಡುವೆ ಇಂದು ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ತಾಪಮಾನದಲ್ಲಿ ವಿಪರೀತ ಏರಿಕೆಯಾಗಿತ್ತು. ಆದರೆ ಇಂದು ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ವಾಯು ಸುಳಿಗಾಳಿಯ ಪರಿಣಾಮ ಕರ್ನಾಟಕ ಮೇಲೂ ಪರಿಣಾಮ ಬೀರಲಿದೆ.
ಇದರಿಂದಾಗಿ ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮಂಡ್ಯ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಂತೂ ಗರಿಷ್ಠ ತಾಪಮಾನ 38 ಡಿಗ್ರಿಯಷ್ಟಿರಲಿದೆ. ಕರ್ನಾಟಕದಲ್ಲಿ ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.