Publish Date: Thu, 25 Sep 2025 (09:00 IST)
Updated Date: Thu, 25 Sep 2025 (09:02 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಈ ಕೆಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ನಿರೀಕ್ಷೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ನಾಲ್ಕೈದು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಉತ್ತರದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ನಿನ್ನೆ ದಿನವಿಡೀ ಮೋಡ, ಕವಿದ ವಾತಾವರಣ, ಸಣ್ಣ ಮಟ್ಟಿಗೆ ಮಳೆಯಾಗಿತ್ತು.
ಇಂದು ಬೆಂಗಳೂರಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ. ಅಲ್ಲದೆ ರಾಮನಗರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಗದಗ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಶಿವಮೊಗ್ಗ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.