Select Your Language

Notifications

webdunia
webdunia
webdunia
webdunia

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

Karnataka Today Weather
ಬೆಂಗಳೂರು: ಕಳೆದ ಕೆಲ ದಿನಗಳಿಂದ ಹಾಸನ, ಕೊಡಗು ಹಾಗೂ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದೀಗ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ನಾಲ್ಕು ದಿನವೂ ಭಾರೀ ಮಳೆಯಾಗಲಿದೆ ಎನ್ನಲಾಗಿದೆ. 

ಈ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಯಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಳೆ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ 64.5 ಮಿ.ಮೀನಿಂದ 115.4 ಮಿ.ಮಿ ವರೆಗೆ ಭಾರಿ ಮಳೆಯಾಗಲಿದೆ. 


ಇನ್ನೂ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಸಾದ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video