Publish Date: Thu, 12 Jun 2025 (08:22 IST)
Updated Date: Thu, 12 Jun 2025 (08:24 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ನಿನ್ನೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿತ್ತು. ಎರಡು ದಿನಗಳಿಗೆ ಮಳೆ ಜೋರಾಗಲಿದ್ದು, ಈ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ಹವಾಮಾನ ಇಲಾಖೆ ಸೂಚನೆಯಂತೆ ಇಂದಿನಿಂದ ಎರಡು ದಿನ ಮಳೆ ಇನ್ನಷ್ಟು ತೀವ್ರವಾಗಲಿದೆ. ಒಟ್ಟು 11 ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ತಿವ್ರವಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,ಕೊಡಗು, ಹಾಸನ, ಹಾವೇರಿ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇಂದೂ ರೆಡ್ ಅಲರ್ಟ್ ಘೋಷಣೆಯಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆಯಾಗಲಿದೆ.
ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಕಲಬುರಗಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ರಾಜ್ಯದ ಗರಿಷ್ಠ ತಾಪಮಾನ ಇಂದು 26 ಡಿಗ್ರಿಗೆ ತಲುಪುವ ನಿರೀಕ್ಷೆಯಿದೆ.