Daily Horoscope

Select Your Language

Notifications

webdunia
webdunia
webdunia
webdunia

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

Karnataka Today Weather
ಬೆಂಗಳೂರು: ಕಳೆದ ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 21ರ ಮಂಗಳವಾರ ಸಂಜೆ ನಂತರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಪ್ರಮಾಣ 64.5 ಮಿ.ಮೀ ನಿಂದ 115. 4 ಮಿ.ಮೀ ವರೆಗೂ ಆಗುವ ಅಂದಾಜಿದೆ

ಇನ್ನೂ ಭಾರೀ ಮಳೆ ಹಿನ್ನೆಲೆ  ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ.) ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ.) ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video