ಬೆಂಗಳೂರು: ಕಳೆದ ಕೆಲ ವಾರಗಳ ಹಿಂದೆ ನಿರಂತರವಾಗಿ ಸುರಿದಿದ್ದ ಮಳೆ ಈಚೆಗೆ ಸ್ವಲ್ಪ ಬಿಡುವು ನೀಡಿದ್ದ. ಇದೀಗ ಮತ್ತೇ ಹವಾಮಾನದಲ್ಲಿ ಭಾರೀ ಬದಲಾವಣೆಯ ಮುನ್ಸೂಚನೆಯಿದೆ.
ಮತ್ತೇ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರ್ನಾಟಕದಲ್ಲಿ ಮುಂದಿನ ಮೂರು ದಿನ ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದೆ. ಅದರಂತೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೆಪ್ಟೆಂಬರ್ 8 ರಿಂದ 10ರವರೆಗೂ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.