ಬೆಂಗಳೂರು: ರಾಜ್ಯದಲ್ಲಿ ಈ ವಾರ ಮಳೆಯ ಅಬ್ಬರ ಕೊಂಚ ಮಟ್ಟಿಗೆ ತಗ್ಗಿದ್ದರೂ ಕೆಲವು ಕಡೆ ಮಾತ್ರ ಭಾರೀ ಮಳೆಯ ಸೂಚನೆ ಕಂಡುಬರುತ್ತಿದೆ. ಇಂದು ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ನಿನ್ನೆ ಮಳೆಯ ಸೂಚನೆಯಿತ್ತು. ಅದರಂತೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಆದರೆ ಕರಾವಳಿ ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು.
ಆದರೆ ವಾರಂತ್ಯಕ್ಕೆ ಮತ್ತೆ ಕರಾವಳಿ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಯಾದಗಿರಿ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣವಿರಲಿದೆ.