ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರ್ನಾಟಕದ ಕೆಲ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇನ್ನೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.
ಇನ್ನೂ ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದುವರೆದು ಆ.30 ಮತ್ತು 31ಕ್ಕೆ ಆರೆಂಜ್ ಅಲರ್ಟ್, ಸೆ.1ರಿಂದ ಸೆ.4 ವರೆಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ.
ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಅಲ್ಲಲ್ಲಿ ಕಳೆದ ವಾರದಿಂದ ಮಳೆಯಾಗುತ್ತಿದೆ. ಇನ್ನೂ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬುಧವಾರದಿಂದ ಮಳೆ ಚುರುಕುಗೊಂಡಿದ್ದು, ಗುರುವಾರವೂ ವಿವಿಧೆಡೆ ಮುಂದುವರೆದಿತ್ತು.
ಇಂದು (ಆ.29)ಕ್ಕೆ ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಾಸನ, ವಿಜಯಪುರ, ಯಾದಗಿರಿ ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.31ರ ವರೆಗೆ ಸಾಧಾರಾಣ ಮಳೆ ಮುಂದುವರೆಯಲಿದೆ. ಆ ಬಳಿಕ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.