Select Your Language

Notifications

webdunia
webdunia
webdunia
webdunia

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

Karnataka Weather
ಬೆಂಗಳೂರು: ಕರ್ನಾಟಕದಲ್ಲಿ ಈಘಾಗಲೇ ಕಡುಬೇಸಿಗೆ ಶುರುವಾಗಿದೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.

ಚಳಿಗಾಲ ಹೋಗಿ ಈಗ ಬಿಸಿಲುಗಾಲ ಶುರುವಾಗಿದೆ. ಅದರಲ್ಲೂ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ವಾರ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗಿತ್ತು. ಆದರೆ ಈ ವಾರವಿಡೀ ಮಳೆಯಾಗುವ ಸಾಧ್ಯತೆಯಿಲ್ಲ. ಬದಲಾಗಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ.

ಇಂದು ಬಳ್ಳಾರಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಣ ಬಿಸಿಲಿರಲಿದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರುವುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಕ್ಕೆ ಏರಿಕೆಯಾಗಲಿದೆ.

ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟು ಕಂಡುಬರುವುದು. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ರಣ ಬಿಸಿಲಿರಲಿದ್ದು ಗರಿಷ್ಠ ತಾಪಮಾನ 33 ಡಿಗ್ರಿಯಷ್ಟು ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ