Publish Date: Fri, 27 Feb 2026 (08:37 IST)
Updated Date: Fri, 27 Feb 2026 (08:40 IST)
ಬೆಂಗಳೂರು: ಈ ವಾರ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಇಂದು ಕರ್ನಾಟಕದಲ್ಲಿ ಮಳೆಯಾಗುವ ಸೂಚನೆಯಿದೆಯೇ, ಇಲ್ಲಿದೆ ಹವಾಮಾನ ವರದಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕಳೆದ ಮೂರು-ನಾಲ್ಕು ದಿನಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಆದರೆ ಈಗ ವಾಯುಭಾರ ಕುಸಿತದ ಪರಿಣಾಮ ಕ್ಷೀಣವಾಗಿದೆ.
ಇಂದು ರಾಜ್ಯದ ಯಾವುದೇ ಜಿಲ್ಲೆಗಳಿಗೆ ಮಳೆಯ ಸೂಚನೆಯಿಲ್ಲ. ಆದರೆ ಬೆಂಗಳೂರು, ತುಮಕೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಲಿದೆ.
ರಾಜ್ಯದ ಇಂದಿನ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟು ಇರಲಿದೆ. ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ.