ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಸಂಜೆ ವೇಳೆ ಭಾರೀ ಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮೇ 24 ರ ಶನಿವಾರದಂದು ಕರ್ನಾಟಕದ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಹಳದಿ ಅಲರ್ಟ್ ಜಾರಿಯಲ್ಲಿದೆ.
ಮಂಗಳೂರಿನಲ್ಲಿ ರಾತ್ರಿ ಹಗಲು ನಿರಂತರ ಮಳೆಯಾಗುತ್ತಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ತಾಲೂಕು ಸೇರಿದಂತೆ ಮಂಗಳೂರು ನಗರ ಹಾಗೂ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಮುಂದಿನ ನಾಲ್ಕು ದಿನಗಳಲ್ಲಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.