Select Your Language

Notifications

webdunia
webdunia
webdunia
webdunia

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Yellow alert declared, Meteorological Department, Bengaluru rain

Sampriya

ಬೆಂಗಳೂರು , ಭಾನುವಾರ, 8 ಜೂನ್ 2025 (10:15 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮುಂಗಾರು ಚುರುಕುಗೊಳ್ಳಲಿದೆ. ಹೀಗಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರದಿಂದ ಜೂ.13ರವರೆಗೆ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  

ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  

ಬೆಂಗಳೂರು ನಗರದಲ್ಲಿ ಜೂನ್ 9 ರಿಂದ 13 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜನ ಮುಂದಿನ ವಾರ 5 ದಿನದ ಮಳೆಗೆ ಸಜ್ಜಾಗಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ