Webdunia - Bharat's app for daily news and videos

Install App

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Sampriya
ಭಾನುವಾರ, 8 ಜೂನ್ 2025 (10:15 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮುಂಗಾರು ಚುರುಕುಗೊಳ್ಳಲಿದೆ. ಹೀಗಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರದಿಂದ ಜೂ.13ರವರೆಗೆ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  

ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  

ಬೆಂಗಳೂರು ನಗರದಲ್ಲಿ ಜೂನ್ 9 ರಿಂದ 13 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜನ ಮುಂದಿನ ವಾರ 5 ದಿನದ ಮಳೆಗೆ ಸಜ್ಜಾಗಬೇಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments