ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿತ್ತು. ಆದರೆ ಇಂದು ರಾಜ್ಯದ ಈ ಭಾಗಗಳಿಗೆ ಮಳೆಯ ನಿರೀಕ್ಷೆಯೇ ಬೇಡ ಎನ್ನುತ್ತಿವೆ ಹವಾಮಾನ ವರದಿಗಳು.
ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಬೀದರ್, ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿಲ್ಲ.
ಅದರಲ್ಲೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಈ ವಾರಂತ್ಯಕ್ಕೆ ಹಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಇದರ ಹೊರತಾಗಿ ಇಂದು ರಾಜ್ಯದ ಗರಿಷ್ಠ ತಾಪಮಾನ 32-33 ಡಿಗ್ರಿಯಷ್ಟು ತಲುಪುವ ಸಾಧ್ಯತೆಯಿದೆ.