Publish Date: Thu, 26 Mar 2026 (08:24 IST)
Updated Date: Thu, 26 Mar 2026 (08:27 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗಿತ್ತು. ಇಂದು ಮಳೆಯ ಸೂಚನೆಯಿಲ್ಲ. ಆದರೆ ತಾಪಮಾನದಲ್ಲಿ ವಿಪರೀತ ಏರಿಕೆಯಾಗಲಿದೆ.
ರಾಜ್ಯದ ಹವಾಮಾನದಲ್ಲಿ ಇಂದಿನಿಂದ ಮತ್ತೆ ಭಾರೀ ಬದಲಾವಣೆಯಾಗಲಿದೆ. ಕಳೆದ ನಾಲ್ಕೈದು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ಆದರೆ ನಿನ್ನೆಯಿಂದ ಮತ್ತೆ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಇಂದು ಮತ್ತಷ್ಟು ಏರಿಕೆ ಕಂಡುಬರಲಿದೆ.
ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಉರಿಬಿಸಿಲಿನ ವಾತಾವರಣವಿರಲಿದೆ. ಅದರಲ್ಲೂ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿಗೆ ಏರಿಕೆಯಾಗಲಿದೆ. ಕಲಬುರಗಿ, ಬೀದರ್, ವಿಜಯಪುರ, ದಕ್ಷಿಣ ಕನ್ನಡ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿಯಷ್ಟು ಕಂಡುಬರಲಿದೆ.
ಇಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣ ಬಿಸಿಲಿನ ಮತ್ತು ಸೆಖೆಯ ವಾತಾವರಣವಿರಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಗೆ ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಕಂಡುಬರಲಿದೆ.