Select Your Language

Notifications

webdunia
webdunia
webdunia
webdunia

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

Karnataka weather, orange alert on coast, moderate rain in Bengaluru

Sampriya

ಬೆಂಗಳೂರು , ಭಾನುವಾರ, 6 ಜುಲೈ 2025 (10:57 IST)
Photo Credit X
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. 

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಕೂಡ ಮಳೆಯಾಗಲಿದೆ.

ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮಳೆಯಾಗಿದೆ. ಭಾನುವಾರವೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಅಣೆಕಟ್ಟೆಗಳು ವಾಡಿಕೆ ಅವಧಿಗಿಂತ ಮೊದಲೇ ಭರ್ತಿಯಾಗಿವೆ. ನದಿಗಳು ಮೈದುಂಬಿ ಹರಿಯುತ್ತಿವೆ. 

ದೇಶದ ಮಧ್ಯ, ಉತ್ತರ, ಕರಾವಳಿ ಮತ್ತು ಈಶಾನ್ಯ ಭಾರತದಲ್ಲಿ ಸಕ್ರಿಯವಾಗಿರುವ ಮಾನ್ಸೂನ್ ವ್ಯವಸ್ಥೆಗಳಿಂದಾಗಿ ಹಲವಾರು ದಿನಗಳವರೆಗೆ ವ್ಯಾಪಕ ಮತ್ತು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಹಲವಾರು ರಾಜ್ಯಗಳಿಗೆ ಆರೇಂಜ್​ ಮತ್ತು ರೆಡ್​ ಅಲರ್ಟ್​ ಗಳನ್ನು ಘೋಷಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್