Webdunia - Bharat's app for daily news and videos

Install App

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

Sampriya
ಭಾನುವಾರ, 6 ಜುಲೈ 2025 (10:57 IST)
Photo Credit X
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. 

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಕೂಡ ಮಳೆಯಾಗಲಿದೆ.

ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮಳೆಯಾಗಿದೆ. ಭಾನುವಾರವೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಅಣೆಕಟ್ಟೆಗಳು ವಾಡಿಕೆ ಅವಧಿಗಿಂತ ಮೊದಲೇ ಭರ್ತಿಯಾಗಿವೆ. ನದಿಗಳು ಮೈದುಂಬಿ ಹರಿಯುತ್ತಿವೆ. 

ದೇಶದ ಮಧ್ಯ, ಉತ್ತರ, ಕರಾವಳಿ ಮತ್ತು ಈಶಾನ್ಯ ಭಾರತದಲ್ಲಿ ಸಕ್ರಿಯವಾಗಿರುವ ಮಾನ್ಸೂನ್ ವ್ಯವಸ್ಥೆಗಳಿಂದಾಗಿ ಹಲವಾರು ದಿನಗಳವರೆಗೆ ವ್ಯಾಪಕ ಮತ್ತು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಹಲವಾರು ರಾಜ್ಯಗಳಿಗೆ ಆರೇಂಜ್​ ಮತ್ತು ರೆಡ್​ ಅಲರ್ಟ್​ ಗಳನ್ನು ಘೋಷಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments