ಬೆಂಗಳೂರು: ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ಮನೆಯಿಂದ ಹೊರ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ರಾತ್ರಿ ಹಗಲು ನಿರಂತರ ಎಡೆಬಿಡದೆ ಮಳೆಯಾಗುತ್ತಿದೆ.
ಭಾನುವಾರ ಮುಂಜಾನೆ ಆರಂಭಗೊಂಡ ಮಳೆ ಬೆಳ್ತಂಗಡಿ ತಾಲ್ಲೂಕಿನಲ್ಲಿ ಗರಿಷ್ಠ ಮಳೆ ದಾಖಲಾಗಿದೆ. ಇದರಿಂದ ಬತ್ತಿ ಹೋಗಿದ್ದ ನದಿ, ತೊರೆಗಳು ಇದೀಗ ನೀರಿನಿಂದ ತುಳುಕುತ್ತಿದೆ.
ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಶನಿವಾರದಿಂದ ಮೇ 28ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಬೆಳಗ್ಗೆಯೇ ಕತ್ತಲೆಯ ವಾತಾವರಣದಿಂದ ಕೂಡಿದೆ.