Select Your Language

Notifications

webdunia
webdunia
webdunia
webdunia

Karnataka Weather: ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ನೋಡಿ

Karnataka Rains

Krishnaveni K

ಬೆಂಗಳೂರು , ಮಂಗಳವಾರ, 3 ಜೂನ್ 2025 (08:22 IST)
ಬೆಂಗಳೂರು: ರಾಜ್ಯದಲ್ಲಿಈಗ ಮುಂಗಾರು ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಾಗಂತ ಕೆಲವು ಜಿಲ್ಲೆಗಳಲ್ಲಿ ಈಗಲೂ ಧಾರಾಕಾರ ಮಳೆಯಾಗುತ್ತಿದೆ. ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ಗಮನಿಸಬೇಕು.

ಕಳೆದ ವಾರ ಆರಂಭದಿಂದಲೇ ರಾಜ್ಯಾದ್ಯಂತ ಭಾರೀ ಮಳೆಯಾಗಿತ್ತು. ಈ ವಾರ ಮಳೆಯ ಅಬ್ಬರ ಕಳೆದ ವಾರದಷ್ಟು ಇರದು. ಹಾಗಿದ್ದರೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ.

ಈ ಬಾರಿ ಮುಂಗಾರು ಮಳೆಯ ಹೊಡೆತ ಹೆಚ್ಚು ಅನುಭವಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯವರು. ಜಿಲ್ಲೆಯಲ್ಲಿ ಕಳೆದ ವಾರದ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು. ಈ ವಾರವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸ್ಥಿತಿಯಿದ್ದು, ಇಂದೂ ಗುಡುಗು ಸಹಿತ ಮಳೆಯಾಗಲಿದೆ ಎಂದು ವರದಿಯಾಗಿದೆ. ಇದಲ್ಲದೆ ಉಡುಪಿ ಜಿಲ್ಲೆಯಲ್ಲೂ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಎರಡು ಜಿಲ್ಲೆಯವರು ಎಚ್ಚರಿಕೆ ವಹಿಸಬೇಕು.

ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಶಿವಮೊಗ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಗದಗ, ದಾವಣಗೆರೆ ಮುಂತಾದ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಬಿಜಾಪುರ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ