ಬೆಂಗಳೂರು: ಕರ್ನಾಟಕದಾದ್ಯಂತ ಇದೀಗ ಭಾರೀ ಮಳೆಯಾಗುತ್ತಿದ್ದು, ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ ಇನ್ನು ಎರಡು ದಿನಗಳಿಗೆ ಮಳೆಯ ಜೊತೆಗೆ ಹವಾಮಾನ ಇಲಾಖೆ ನೀಡಿರುವ ಈ ಎಚ್ಚರಿಕೆ ಗಮನಿಸಬೇಕು.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮಳೆಗಾಲದ ವಾತಾವರಣವಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಂತೂ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಬಿರುಗಾಳಿ ಕಂಡುಬಂದಿತ್ತು.
ಇಂದೂ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಇಂದೂ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಜೊತೆ ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಡಲ ತೀರಗಳಿಗೆ ಹೋಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ತಣ್ಣಗಾಗಿದ್ದರೂ ಇಂದೂ ಮೋಡ ಕವಿದ ವಾತಾವರಣ, ತುಂತುರು ಮಳೆ ಮುಂದುವರಿಯಲಿದೆ. ಇದೀಗ ರಾಜ್ಯದ ಗರಿಷ್ಠ ತಾಪಮಾನ 28 ಡಿಗ್ರಿಗೆ ಬಂದಿದೆ.