ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ತಾಪದ ನಡುವೆ ಇಂದಿನಿಂದ ನಾಲ್ಕು ದಿನಗಳವರೆಗೆ ಬಹುತೇಕ ಕಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಇಲ್ಲಿದೆ ನೋಡಿ ಹವಾಮಾನ ವರದಿ.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ಸದ್ಯದ ಹವಾಮಾನ ವರದಿಗಳ ಪ್ರಕಾರ ಭಾನುವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಕೆಲವೆಡೆ ತುಂತುರು ಮಳೆಯಾಗಿತ್ತು. ಇನ್ನು ಎರಡು ದಿನಗಳಿಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಹಾವೇರಿ, ಬಳ್ಳಾರಿ, ತುಮಕೂರು, ಕೋಲಾರ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.
ಆದರೆ ಉತ್ತರ ಕನ್ನಡ, ಬೀದರ್, ಚಿತ್ರದುರ್ಗ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿಲ್ಲ. ಸದ್ಯಕ್ಕೆ ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 32 ಡಿಗ್ರಿಯಷ್ಟಿರಲಿದೆ.