Publish Date: Fri, 26 Sep 2025 (08:37 IST)
Updated Date: Fri, 26 Sep 2025 (08:40 IST)
ಬೆಂಗಳೂರು: ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದಿನಿಂದ ಯಾವೆಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಇಲ್ಲಿದೆ ವಿವರ.
ವಾರಂತ್ಯದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಈಗಾಗಲೇ ಹವಾಮಾನ ವರದಿ ಹೇಳಿದೆ. ಅದರಂತೆ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಹಾಗಿದ್ದರೂ ಇನ್ನೂ ಒಂದೆರಡು ದಿನಗಳಿಗೆ ಮಳೆಯ ನಿರೀಕ್ಷೆಯಿದೆ. ಇದಲ್ಲದೆ ರಾಯಚೂರು, ಕಲಬುರಗಿ, ದಾವಣಗೆರೆ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.
ಉಳಿದಂತೆ ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.