Publish Date: Wed, 25 Feb 2026 (08:27 IST)
Updated Date: Wed, 25 Feb 2026 (08:29 IST)
ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದರೆ ಇನ್ನೊಂದೆಡೆ ಕೆಲವು ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಿದೆ. ಇಂದು ಈ ಜಿಲ್ಲೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ವಾರ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭಾರೀ ಮಳೆಯಾಗಿತ್ತು. ಬಿಸಿಲಿನ ಝಳದ ನಡುವೆ ಅನಿರೀಕ್ಷಿತ ಮಳೆ ತಂಪು ನೀಡಿತ್ತು. ಈ ವಾರವೂ ದಕ್ಷಿಣ ಕನ್ನಡ ಜಿಲ್ಲೆಗೆ ಮಳೆಯ ಸೂಚನೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗಲಿದೆ.
ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವುದು. ಬೆಂಗಳೂರಿನಲ್ಲೂ ಕಳೆದ ವಾರ ಮೋಡವಿದ್ದರೂ ಮಳೆಯಾಗಿರಲಿಲ್ಲ. ಈ ವಾರವೂ ಮಳೆಯ ಸೂಚನೆಯಿಲ್ಲ.
ಕೆಲವು ಜಿಲ್ಲೆಗಳಲ್ಲಿ ಮಾತ್ರ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಅದನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಬಿಸಿಲು ಕಂಡುಬರುವುದು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 30 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ.