Daily Horoscope
✕

Karnataka Weather: ಕರ್ನಾಟಕದಲ್ಲಿ ಇಂದು ಈ ಜಿಲ್ಲೆಗೆ ಮಳೆಯ ಸಾಧ್ಯತೆ

Krishnaveni K
ಬುಧವಾರ, 25 ಫೆಬ್ರವರಿ 2026 (08:27 IST)
ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದರೆ ಇನ್ನೊಂದೆಡೆ ಕೆಲವು ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಿದೆ. ಇಂದು ಈ ಜಿಲ್ಲೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ವಾರ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭಾರೀ ಮಳೆಯಾಗಿತ್ತು. ಬಿಸಿಲಿನ ಝಳದ ನಡುವೆ ಅನಿರೀಕ್ಷಿತ ಮಳೆ ತಂಪು ನೀಡಿತ್ತು. ಈ ವಾರವೂ ದಕ್ಷಿಣ ಕನ್ನಡ ಜಿಲ್ಲೆಗೆ ಮಳೆಯ ಸೂಚನೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗಲಿದೆ.

ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವುದು. ಬೆಂಗಳೂರಿನಲ್ಲೂ ಕಳೆದ ವಾರ ಮೋಡವಿದ್ದರೂ ಮಳೆಯಾಗಿರಲಿಲ್ಲ. ಈ ವಾರವೂ ಮಳೆಯ ಸೂಚನೆಯಿಲ್ಲ.

ಕೆಲವು ಜಿಲ್ಲೆಗಳಲ್ಲಿ ಮಾತ್ರ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಅದನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಬಿಸಿಲು ಕಂಡುಬರುವುದು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 30 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ
Show comments