Publish Date: Wed, 01 Oct 2025 (08:39 IST)
Updated Date: Wed, 01 Oct 2025 (08:44 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಬಿಟ್ಟರೆ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿದೆ ಇಲ್ಲಿದೆ ವಿವರ.
ರಾಜ್ಯದಲ್ಲಿ ಈ ವಾರ ಮಳೆಯ ಅಬ್ಬರ ಆರಂಭದ ಮೂರು ದಿನ ತಗ್ಗಲಿದೆ ಎಂದು ಈಗಾಗಲೇ ಹವಾಮಾನ ವರದಿಗಳು ಸೂಚಿಸಿವೆ. ಇಂದೂ ಕೂಡಾ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲು ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿತ್ತು. ಇಂದೂ ಅದೇ ರೀತಿ ವಾತಾವರಣವಿರಲಿದೆ.
ಉಳಿದಂತೆ ಚಿಕ್ಕಮಗಳೂರು, ಕೊಡಗು, ರಾಮನಗರ, ತುಮಕೂರು, ವಿಜಯಪುರ, ಚಿತ್ರದುರ್ಗ, ಕೊಪ್ಪಳ, ಹಾವೇರಿ, ರಾಯಚೂರು, ಬೀದರ್, ಶಿವಮೊಗ್ಗ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಬಾಗಲಕೋಟೆ, ದಾವಣೆಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣವಿರಲಿದೆ.
Krishnaveni K
Publish Date: Wed, 01 Oct 2025 (08:39 IST)
Updated Date: Wed, 01 Oct 2025 (08:44 IST)