Publish Date: Fri, 30 May 2025 (08:21 IST)
Updated Date: Fri, 30 May 2025 (08:23 IST)
ಬೆಂಗಳೂರು: ರಾಜ್ಯದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು ಇಂದೂ ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯ ಸೂಚನೆಯಿದೆ. ವಿಶೇಷವಾಗಿ ಆರು ಜಿಲ್ಲೆಗಳ ಜನರು ಇಂದಿನ ಹವಾಮಾನ ಮುನ್ಸೂಚನೆಯನ್ನು ತಪ್ಪದೇ ಗಮನಿಸಬೇಕು.
ಕಳೆದ ಒಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ನಿನ್ನೆ ಬೆಂಗಳೂರಿನಲ್ಲೂ ತಕ್ಕಮಟ್ಟಿಗೆ ಮಳೆಯಾಗಿತ್ತು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆ. ಹಾಗಿದ್ದರೂ ದಿನವಿಡೀ ಮೋಡ ಕವಿದ ವಾತಾವರಣ ಮತ್ತು ಗಾಳಿ ಬೀಸುತ್ತಿದೆ.
ಇಂದೂ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಆರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆಯಾಗುತ್ತಿದೆ. ಇಂದೂ ಇಲ್ಲಿ ಭಾರೀ ಮಳೆಯಾಗಲಿದೆ.
ಉಳಿದಂತೆ ಬೆಂಗಳೂರು, ಮಂಡ್ಯ, ತುಮಕೂರು, ಕೋಲಾರ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಗಳಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ.
Krishnaveni K
Publish Date: Fri, 30 May 2025 (08:21 IST)
Updated Date: Fri, 30 May 2025 (08:23 IST)