Publish Date: Mon, 12 May 2025 (07:59 IST)
Updated Date: Mon, 12 May 2025 (08:02 IST)
ಬೆಂಗಳೂರು: ಕರ್ನಾಟಕದಲ್ಲಿ ಈ ವಾರ ಹಲವು ಜಿಲ್ಲೆಗಳಲ್ಲಿ ಭಾರೀಮಳೆಯಾಗುವ ನಿರೀಕ್ಷೆಯಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ವಾರ ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಈ ವಾರ ಮತ್ತೆ ಮಳೆಯಾಗಲಿದೆ. ಮೂಲಗಳ ಪ್ರಕಾರ ಈ ವಾರದ ಅಂತ್ಯದಿಂದಲೇ ಮುಂಗಾರು ಕೇರಳ ಪ್ರವೇಶಿಸುವ ನಿರೀಕ್ಷೆಯಿದೆ. ಈ ಬಾರಿ ಬೇಗನೇ ಮುಂಗಾರು ಆರಂಭವಾಗಲಿದೆ ಎನ್ನಲಾಗಿದೆ.
ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಉಳಿದಂತೆ ಹಾಸನ, ಚಿಕ್ಕಮಗಳೂರು, ಹಾವೇರಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.