ಬೆಂಗಳೂರು: ರಾಜ್ಯದಲ್ಲಿ ಈಗ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಅವಧಿಗೆ ಮುನ್ನ ಬಂದ ಮಳೆ ಅವಾಂತರಗಳನ್ನೇ ಸೃಷ್ಟಿಸುತ್ತಿದೆ. ಇಂದು ಹವಾಮಾನ ಇಲಾಖೆಯ ಈ ವರದಿಯನ್ನು ತಪ್ಪದೇ ಗಮನಿಸಿ.
ಇಂದೂ ಕೂಡಾ ರಾಜ್ಯದ ಬಹುತೇ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದೂ ಕೂಡಾ ಬಹುತೇಕ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಲ್ಲಿ ಮಳೆ ಅವಾಂತರಗಳನ್ನೇ ಸೃಷ್ಟಿಸಿದೆ. ಇಂದೂ ಕೂಡಾ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಇನ್ನು ಚಿಕ್ಕಮಗಳೂರು, ಕೊಡಗಿನಂತಹ ಗುಡ್ಡಗಾಡು ಪ್ರದೇಶಗಳಿಗೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.
ಉಳಿದಂತೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಮಂಡ್ಯ, ಹಾಸನ, ಕೋಲಾರ, ತುಮಕೂರು, ಶಿವಮೊಗ್ಗ, ಹಾವೇರಿ, ಕಲಬುರಗಿ, ರಾಯಚೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉಳಿದಂತೆ ಮೋಡ ಕವಿದ ವಾತಾವರಣವಿರಲಿದೆ. ಮೇ 31 ರವರೆಗೂ ಇದೇ ರೀತಿ ಭಾರೀ ಮಳೆ ಮುಂದುವರಿಯಲಿದೆ.