Publish Date: Thu, 21 Aug 2025 (08:30 IST)
Updated Date: Thu, 21 Aug 2025 (08:33 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಲೇ ಇತ್ತು. ಸತತ ಮಳೆಯಿಂದ ಬೇಸತ್ತಿದ್ದರೆ ಇಲ್ಲಿದೆ ಗುಡ್ ನ್ಯೂಸ್. ಇಂದಿನ ಹವಾಮಾನ ವರದಿ ಹೀಗಿದೆ.
ಕಳೆದ ಎರಡು ವಾರಗಳಿಂದ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಭಾರೀ ಮಳೆಯಾಗುತ್ತಲೇ ಇತ್ತು. ನಿನ್ನೆಯವರೆಗೂ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಲೇ ಇತ್ತು. ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ನಿನ್ನೆ ಮಳೆಯಾಗಿತ್ತು.
ಆದರೆ ಇಂದು ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ ಎಂದು ವರದಿಗಳು ಹೇಳುತ್ತಿವೆ. ಇಂದು ರಾಜ್ಯದ ಹವಾಮಾನ ವರದಿ ಪ್ರಕಾರ ಮಳೆಯ ಅಬ್ಬರ ಕಡಿಮೆಯಾಗಿರಲಿದೆ. ಆದರೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಉಳಿದಂತೆ ಬೆಳಗಾವಿ, ಶಿವಮೊಗ್ಗ, ರಾಯಚೂರು, ಹಾವೇರಿ, ಬಾಗಲಕೋಟೆ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಗದಗ, ಬೀದರ್, ಕಲಬುರಗಿ, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ಚಿಕ್ಕಮಗಳೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.