Publish Date: Fri, 22 Aug 2025 (08:28 IST)
Updated Date: Fri, 22 Aug 2025 (08:31 IST)
ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕೊಂಚ ತಣ್ಣಗಾಗಿದೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ ಹವಾಮಾನ ವರದಿ ಇಲ್ಲಿದೆ ನೋಡಿ.
ಕರ್ನಾಟಕದಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಈ ವಾರದ ಆರಂಭದಲ್ಲೂ ಮಳೆಯ ಅಬ್ಬರ ಜೋರಾಗಿಯೇ ಇತ್ತು. ಆದರೆ ಎರಡು ದಿನಗಳಿಂದ ಕೊಂಚ ತಣ್ಣಗಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣವಿದೆ. ಇಂದೂ ಬೆಂಗಳೂರಿನಲ್ಲಿ ಇದೇ ವಾತಾವರಣವಿರಲಿದೆ.
ಇಂದು ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಆಗಸ್ಟ್ 24 ರವರೆಗೂ ಇದೇ ವಾತಾವರಣ ಮುಂದುವರಿಯಲಿದೆ. ಹಾವೇರಿ, ಶಿವಮೊಗ್ಗ, ಮೈಸೂರು, ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದೆ.
ಉಳಿದಂತೆ ಬೆಳಗಾವಿ, ಕೋಲಾರ, ಬೆಂಗಳೂರು, ಗದಗ, ಬೀದರ್, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ಚಾಮರಾಜನಗರ, ವಿಜಯಪುರ, ಕೊಪ್ಪಳ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ.