Daily Horoscope
✕

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆಯ ಅಬ್ಬರ

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (08:37 IST)
ಬೆಂಗಳೂರು: ರಾಜ್ಯದಲ್ಲಿ ಇದೀಗ ಕೆಲವು ಜಿಲ್ಲೆಗಳನ್ನು ಬಿಟ್ಟರೆ ಉಳಿದ ಕಡೆ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಆದರೆ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕರ್ನಾಟಕದಲ್ಲಿ ಈ ವಾರವಿಡೀ ಉತ್ತರದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮಳೆಯ ಅಬ್ಬರ ಕಡಿಮೆಯಾಗಿತ್ತು. ಮಳೆಗಿಂತ ಈ ವಾರ ಗುಡುಗು, ಸಿಡಿಲಿನ ಅಬ್ಬರವೇ ಹೆಚ್ಚಾಗಿದೆ. ಈ ವಾರಂತ್ಯದಲ್ಲೂ ಹಲವು ಕಡೆ ಮೋಡ ಕವಿದ ವಾತಾವರಣ ಮತ್ತು ಗುಡುಗು ಮಾತ್ರ ಇರಲಿದೆ.

ಬಳ್ಳಾರಿ, ಉತ್ತರ ಕನ್ನಡ, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಸಂಭವವಿದೆ. ವಿಶೇಷವಾಗಿ ಇಂದು ಗದಗ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ, ಹುಬ್ಬಳ್ಳಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ, ಬೆಳಗಾವಿ, ಗುಡುಗು ಸಿಡಿಲಿನ ವಾತಾವರಣವಿರಲಿದೆ.

ಉಳಿದಂತೆ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು, ರಾಮನಗರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಇಂದು ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments