ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಲೂ ಮಳೆ, ಗುಡುಗು ಅಬ್ಬರ ಕಂಡುಬರುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಿರಲಿದೆ ಇಲ್ಲಿದೆ ವಿವರ.
ಈ ವಾರ ಕರಾವಳಿ, ಬೆಂಗಳೂರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಕಂಡುಬಂದಿದೆ. ಉಳಿದ ಹಲವು ಕಡೆ ಮೋಡ ಕವಿದ ವಾತಾವರಣವಿತ್ತು. ಇಂದೂ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 9 ರವರೆಗೂ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಉಳಿದಂತೆ ಹುಬ್ಬಳ್ಳಿ, ಧಾರವಾಡ, ಹಾಸನ, ಕೊಡಗು, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ.