ಬೆಂಗಳೂರು: ವಾರವಿಡೀ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇತ್ತು. ಇಂದು ಈ ಒಂದೇ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಈ ವಾರ ಮಳೆಯಾಗುತ್ತಲೇ ಇದೆ. ಅಕ್ಟೋಬರ್ 19 ರವರೆಗೂ ಮಳೆ ಮುಂದುವರಿಯಲಿದೆ ಎನ್ನಲಾಗಿದೆ. ಇಂದೂ ಕೂಡಾ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಾಮರಾಜನಗರ, ಜಿಲ್ಲೆಗಳಲ್ಲಿ ಸಣ್ಣ ಮಳೆಯ ನಿರೀಕ್ಷೆಯಿದೆ.
ಉಳಿದಂತೆ ಜಿಲ್ಲೆಗಳಲ್ಲಿ ಉಡುಪಿ, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಗದಗ, ಬೀದರ್, ಯಾದಗಿರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.