Publish Date: Thu, 30 Oct 2025 (08:27 IST)
Updated Date: Thu, 30 Oct 2025 (08:30 IST)
ಬೆಂಗಳೂರು: ಸೈಕ್ಲೋನ್ ಇಫೆಕ್ಟ್ ನಿಂದಾಗಿ ನಿನ್ನೆಯವರೆಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿತ್ತು. ಇಂದಿನಿಂದ ಹವಾಮಾನದಲ್ಲಿಮಹತ್ವದ ಬದಲಾವಣೆ ಗಮನಿಸಿ.
ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆಯವರೆಗೂ ಮಳೆಯಾಗಿತ್ತು. ಆದರೆ ಇಂದಿನಿಂದ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.
ಆದರೆ ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಮಾತ್ರ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಅದೂ ಕೂಡಾ ಸಣ್ಣ ಮಟ್ಟಿಗಷ್ಟೇ ಮಳೆಯಾಗುವ ಸಾಧ್ಯತೆಯಿದೆಯಷ್ಟೇ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ಗದಗ, ಬೆಳಗಾವಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣವಿರಲಿದೆ.