ಬೆಂಗಳೂರು: ರಾಜ್ಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗಿತ್ತು. ಆದರೆ ಇಂದು ಈ ಜಿಲ್ಲೆಯನ್ನು ಹೊರತುಪಡಿಸಿದರೆ ಉಳಿದ ಕಡೆ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.
									
			
			 
 			
 
 			
					
			        							
								
																	ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಆದರೆ ಈಗ ಸೈಕ್ಲೋನ್ ಪರಿಣಾಮ ತಗ್ಗಿದ್ದು, ಮಳೆಯೂ ಕಡಿಮೆಯಾಗಲಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.
									
										
								
																	ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇಂದು ತುಂತುರು ಮಳೆ, ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಉಳಿದಂತೆ ಎಲ್ಲಾ ಕಡೆ ಬಿಸಿಲಿನ ವಾತಾವರಣವಿರಲಿದೆ. ಈ ವಾತಾವರಣ ಇನ್ನೂ ನಾಲ್ಕೈದು ದಿನ ಮುಂದುವರಿಯಲಿದೆ.
									
											
							                     
							
							
			        							
								
																	ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣವಿರಲಿದೆ.