Publish Date: Wed, 05 Nov 2025 (08:30 IST)
Updated Date: Wed, 05 Nov 2025 (08:32 IST)
ಬೆಂಗಳೂರು: ನಿನ್ನೆ ಮತ್ತು ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿತ್ತು. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ನೋಡಿ ವಿವರ.
ಕಳೆದ ವಾರ ಸೈಕ್ಲೋನ್ ಮಳೆಯ ಬಳಿಕ ನಾಲ್ಕೈದು ದಿನಗಳಿಗೆ ಮಳೆ ಕೊಂಚ ವಿರಾಮ ನೀಡಿತ್ತು. ಆದರೆ ನಿನ್ನೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿದ್ದವು.
ಮೈಸೂರು, ಮಂಡ್ಯ, ಬೆಂಗಳೂರು, ಚಾಮರಾಜಗರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ದಕ್ಷಿಣ ಕನ್ನಡ, ಉತ್ತರ, ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಹಾವೇರಿ, ರಾಯಚೂರು, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ, ಯಾದಗಿರಿ, ಬೀದರ್, ಗದಗ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣವಿರಲಿದೆ.