Publish Date: Fri, 07 Nov 2025 (08:25 IST)
Updated Date: Fri, 07 Nov 2025 (08:28 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಕೆಲವೆಡೆ ಮಳೆಯಾಗುತ್ತಿದ್ದರೆ ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣವಿದೆ. ಹವಾಮಾನ ವರದಿ ಪ್ರಕಾರ ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಹಿಂಗಾರು ಮಳೆ ಮತ್ತೆ ರಾಜ್ಯದಲ್ಲಿ ಚುರುಕುಗೊಂಡಿದ್ದು ಇಂದೂ ಮಳೆಯಾಗಲಿದೆ. ಈಶಾನ್ಯ ಮಾರುತ ಬೀಸುವುದರಿಂದ ಕೆಲವೆಡೆ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
ಇಂದು ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಗದಗ, ಬೀದರ್, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.