ಬೆಂಗಳೂರು: ಕಳೆದ ವಾರಂತ್ಯಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗಿತ್ತು. ಈ ವಾರ ಮಳೆಯಿರುತ್ತಾ, ಚಳಿ ಹೆಚ್ಚಾಗುತ್ತಾ ಇಲ್ಲಿದೆ ವಾರದ ಹವಾಮಾನ ವರದಿ.
ಅಂತೂ ಮಳೆಗಾಲ ಮುಗಿಯಿತು ಎನ್ನುವಷ್ಟರಲ್ಲಿ ರಾಜ್ಯದಲ್ಲಿ ಮತ್ತೆ ಸಣ್ಣ ಪುಟ್ಟ ಮಳೆಯಾಗುತ್ತಿದೆ. ಕೆಲವು ಜಿಲ್ಲೆಗಳಿಗೆ ಈ ವಾರವೂ ಮಳೆಯ ಸೂಚನೆಯಿದೆ. ಇನ್ನು ಕೆಲವು ದಿನ ಮೋಡ ಕವಿದ ವಾತಾವರಣವಿರಲಿದೆ. ಇದರಿಂದಾಗಿ ತಾಪಮಾನ ಕೊಂಚ ಹೆಚ್ಚಾಗಲಿದೆ.
ಈ ವಾರ ಆರಂಭದಲ್ಲಿ ಎರಡು ದಿನ ಮೋಡ ಕವಿದ ವಾತಾವರಣವಿದ್ದರೆ ವಾರದ ಮಧ್ಯದಿಂದ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು, ತುಮಕೂರು, ಕೋಲಾರ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಈ ವಾರ ಮಳೆಯ ಸಾಧ್ಯತೆಯಿದೆ.
ಉತ್ತರ ಕನ್ನಡ, ಚಿತ್ರದುರ್ಗ, ರಾಯಚೂರು, ಹಾವೇರಿ, ಗದಗ, ಬೀದರ್, ಕೊಪ್ಪಳ, ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.