ಬೆಂಗಳೂರು: ರಾಜ್ಯದಲ್ಲಿ ಈಗ ಒಂದೆಡೆ ಚಳಿ, ಇನ್ನೊಂದೆಡೆ ಮಳೆ ಎನ್ನುವ ಪರಿಸ್ಥಿತಿಯಾಗಿದೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ಕಳೆದ ಒಂದು ವಾರದಿಂದ ಕೆಲವೆಡೆ ಮಳೆಯಿದ್ದರೆ ಮತ್ತೆ ಕೆಲವೆಡೆ ವಿಪರೀತ ಚಳಿಯೆನ್ನುವ ವಾತಾವರಣವಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗಿದ್ದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿತ್ತು. ಇಂದು ಯಾವ ಜಿಲ್ಲೆಗಳಿಗೆ ಮಳೆ, ಯಾವ ಜಿಲ್ಲೆಗಳಿಗೆ ಬಿಸಿಲಿರಲಿದೆ ಇಲ್ಲಿದೆ ವಿವರ.
ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಉತ್ತರ ಕನ್ನಡ, ರಾಮನಗರ, ಹಾವೇರಿ, ರಾಯಚೂರು, ಹಾವೇರಿ, ರಾಯಚೂರು, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.