Publish Date: Sat, 22 Nov 2025 (08:41 IST)
Updated Date: Sat, 22 Nov 2025 (08:43 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮಳೆ ಮತ್ತು ಚಳಿ ಎರಡೂ ಕಾಣಿಸಿಕೊಳ್ಳುತ್ತಿದೆ. ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರುತ್ತದೆ ಇಲ್ಲಿದೆ ವಿವರ.
ಬೆಂಗಳೂರಿನಲ್ಲಿ ಸತತವಾಗಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಿದೆ. ಕರಾವಳಿಯಲ್ಲಿ ಮಳೆಯೂ ಕಂಡುಬರುತ್ತಿದೆ. ಹವಾಮಾನ ವರದಿಗಳ ಪ್ರಕಾರ ಈ ವಾರಂತ್ಯಕ್ಕೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ಜಿಲ್ಲೆಗಳಲ್ಲಿ ಮಳೆಯಿರಲಿದೆ. ಉತ್ತರ ಕನ್ನಡ, ಉಡುಪಿ, ಗದಗ, ಬೀದರ್, ಹುಬ್ಬಳ್ಳಿ, ಶಿವಮೊಗ್ಗ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಕಂಡುಬರಲಿದೆ. ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿರಲಿದೆ ಎಂದು ವರದಿಯಾಗಿದೆ.