Publish Date: Tue, 02 Dec 2025 (08:42 IST)
Updated Date: Tue, 02 Dec 2025 (08:44 IST)
ಬೆಂಗಳೂರು: ಶ್ರೀಲಂಕಾದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಕಂಡುಬಂದಿತ್ತು. ಆದರೆ ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ಸತತ ಮೂರು-ನಾಲ್ಕು ದಿನಗಳಿಂದ ವಿಪರೀತ ಚಳಿ, ತುಂತುರು ಮಳೆಯ ವಾತಾವರಣದಿಂದ ಗಡ ಗಡ ಎನ್ನುವಂತಾಗಿತ್ತು. ಇಂದೂ ಮೋಡಕವಿದ ವಾತಾವರಣವಿರಲಿದೆ. ಆದರೆ ಇಂದು ತಕ್ಕ ಮಟ್ಟಿಗೆ ತಾಪಮಾನ ಹೆಚ್ಚಾಗಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಉಳಿದಂತೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಗದಗ, ಬೀದರ್, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕಲಬುರಗಿ, ಶಿವಮೊಗ್ಗ,ಯಾದಗಿರಿ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇಂದಿನ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.