Publish Date: Thu, 04 Dec 2025 (08:47 IST)
Updated Date: Thu, 04 Dec 2025 (08:53 IST)
ಬೆಂಗಳೂರು: ರಾಜ್ಯದಲ್ಲಿ ದಿತ್ವಾ ಚಂಡಮಾರುತದ ಪರಿಣಾಮ ಭಾರೀ ಮಳೆಯ ಸೂಚನೆಯಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ ಇಲ್ಲಿದೆ ಹವಾಮಾನ ವರದಿ.
ವಾರಂತ್ಯದವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಇಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನೆಯಿದೆ.
ಉಳಿದಂತೆ ಉತ್ತರ ಕನ್ನಡ, ಮೈಸೂರು, ಮಂಡ್ಯ, ಚಾಮರಾಜನಗರ, ರಾಯಚೂರು, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಅಥವಾ ಭಾಗಶಃ ಬಿಸಿಲು-ಮೋಡದ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.