Publish Date: Fri, 05 Dec 2025 (08:47 IST)
Updated Date: Fri, 05 Dec 2025 (08:49 IST)
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಮತ್ತು ಮಳೆಗಾಲದ ವಾತಾವರಣ ಒಂದೇ ದಿನ ಕಂಡುಬರುತ್ತಿದೆ. ಚಳಿಯ ನಡುವೆಯೂ ಇಂದು ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ.
ದಿತ್ವಾ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಆಗುತ್ತಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ಕಳೆದ ಒಂದು ವಾರದಿಂದ ತುಂತುರು ಮಳೆ, ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿಯ ವಾತಾವರಣವಿದೆ.
ಇಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಮಳೆಯ ಸೂಚನೆಯಿದೆ.
ದಕ್ಷಿಣ ಕನ್ನಡ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬೀದರ್, ಗದಗ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಬೆಳಗಾವಿ, ಕಲಬುರಗಿ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.